alex Certify ರಾಜ್ಯದಲ್ಲಿಂದು 188 ಜನರಿಗೆ ಸೋಂಕು, 12 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 188 ಜನರಿಗೆ ಸೋಂಕು, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 188 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 12 ಮಂದಿ ಮೃತಪಟ್ಟಿದ್ದಾರೆ. 816 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,41,453 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 39,969 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,97,239 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 0.45 ರಷ್ಟು ಇದೆ. 4,207 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 370 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2735 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 4, ಧಾರವಾಡ 2, ಬಳ್ಳಾರಿ, ಹಾಸನ, ಮಂಡ್ಯ, ರಾಮನಗರ, ತುಮಕೂರು, ಉಡುಪಿ ತಲಾ 1 ಸೇರಿ 12 ಜನ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...