ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಭಾರೀ ಇಳಿಮುಖವಾಗಿದೆ.
ಇಳಿಕೆ ಹಾದಿಯಲ್ಲಿ ಮೊದಲ ಬಾರಿಗೆ ಹೊಸ ಕೇಸ್ 3 ಸಾವಿರಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 2576 ಜನರಿಗೆ ಸೋಂಕು ತಗುಲಿದೆ. ಇವತ್ತು 93 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಸಾವಿನ ಸಂಖ್ಯೆ ಎರಡಂಕಿಗೆ ಇಳಿದಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ ಮೊದಲ ಸಲ 1 ಲಕ್ಷಕ್ಕಿಂತ ಕಡಿಮೆಯಾಗಿದ್ದು, 97,592 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಇವತ್ತು ಶೇಕಡ ಎರಡಕ್ಕಿಂತ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 563 ಜನರಿಗೆ ಸೋಂಕು ತಗುಲಿದೆ.