alex Certify ರಾಜ್ಯದಲ್ಲಿಂದು ಕೊರೊನಾ ಭಾರಿ ಇಳಿಕೆ: ಇಲ್ಲಿದೆ ಜಿಲ್ಲಾವಾರು ಕಂಪ್ಲೀಟ್ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೊನಾ ಭಾರಿ ಇಳಿಕೆ: ಇಲ್ಲಿದೆ ಜಿಲ್ಲಾವಾರು ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಭಾರೀ ಇಳಿಮುಖವಾಗಿದೆ.

ಮೊದಲ ಬಾರಿಗೆ ಹೊಸ ಕೇಸ್ 3 ಸಾವಿರಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 2576 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,37,206 ಕ್ಕೆ ಏರಿಕೆಯಾಗಿದೆ.

ಇವತ್ತು 5933 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,04,755 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು 93 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 34,836 ಸೋಂಕಿತರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಯಾಗಿದ್ದು, 97,592 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.92 ಇದೆ.

ರಾಜಧಾನಿ ಬೆಂಗಳೂರಿನಲ್ಲಿ 563 ಜನರಿಗೆ ಸೋಂಕು ತಗುಲಿದೆ. 18 ಸೋಂಕಿತರು ಮೃತಪಟ್ಟಿದ್ದಾರೆ. 1588 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 62,430 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...