
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಮುಖವಾಗಿದ್ದು, 1386 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,72,684 ಕ್ಕೆ ಏರಿಕೆಯಾಗಿದೆ. ಇವತ್ತು 3204 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,01,907 ಜನ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ 34,858 ಸಕ್ರಿಯ ಪ್ರಕರಣಗಳಿದ್ದು, ಇವತ್ತು 61 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 35,896 ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.26 ರಷ್ಟು ಇದೆ.
ಅದೇ ರೀತಿ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 319 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಇವತ್ತು 784 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 12,985 ಸಕ್ರಿಯ ಪ್ರಕರಣಗಳು ಇವೆ.

