alex Certify ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖ – 755 ಜನರಿಗೆ ಸೋಂಕು, 3 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖ – 755 ಜನರಿಗೆ ಸೋಂಕು, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 755 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,21,128 ಕ್ಕೆ ಏರಿಕೆಯಾಗಿದೆ.

ಇವತ್ತು ರಾಜ್ಯದಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,099 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,98,176 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 10,834 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 343 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,89,193 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೋನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ 4322 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 3,77,906 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 6964 ಜನ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...