alex Certify ರಾಜ್ಯದಲ್ಲಿಂದು 775 ಜನರಿಗೆ ಸೋಂಕು, 9 ಮಂದಿ ಸಾವು: ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 775 ಜನರಿಗೆ ಸೋಂಕು, 9 ಮಂದಿ ಸಾವು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 775 ಜನರಿಗೆ ಕೊರೊನಾ ಸೋಂಕು ತಗುಲಿದೆ. 9 ಮಂದಿ ಸೋಂಕಿತರು ಮೃತಪಟ್ಟಿದ್ದು, 860 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,73,395 ಕ್ಕೆ ಏರಿಕೆಯಾಗಿದ್ದು, 37,726 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 29,22,427 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 13,213 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.54 ರಷ್ಟು ಇದೆ.

ಬೆಂಗಳೂರಿನಲ್ಲಿ 255 ಜನರಿಗೆ ಸೋಂಕು ತಗುಲಿದ್ದು, 205 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ. 7483 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 3, ಬಳ್ಳಾರಿ 1, ಬೀದರ್ 1, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ದಾವಣಗೆರೆ 2, ಧಾರವಾಡ 2, ಗದಗ 1, ಹಾವೇರಿ 0, ಕಲಬುರ್ಗಿ 0, ಕೊಪ್ಪಳ 0, ರಾಯಚೂರು 1, ರಾಮನಗರ 1, ವಿಜಯಪುರ 1, ಯಾದಗಿರಿ 0, ಬೆಂಗಳೂರು ನಗರ 255, ಚಿಕ್ಕಮಗಳೂರು 52, ದಕ್ಷಿಣಕನ್ನಡ 99, ಕೊಡಗು 55, ಮೈಸೂರು 81, ಉಡುಪಿ 40 ಹೊಸ ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಳಗಾವಿ 1, ಬೆಂಗಳೂರು ನಗರ 3, ದಕ್ಷಿಣಕನ್ನಡ 1, ಹಾಸನ 1, ಕೊಡಗು 1, ಮೈಸೂರು 1, ಶಿವಮೊಗ್ಗ 1 ಸೇರಿ 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...