
ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.14 ರಷ್ಟು ಇದೆ. 24 ಗಂಟೆಯಲ್ಲಿ 7579 ಕೋವಿಡ್ ಪರೀಕ್ಷೆ ನಡೆಸಲಾಗಿದೆ. 672 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ. 165 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಧಾರವಾಡ 9, ಚಿಕ್ಕಮಗಳೂರು 8, ಶಿವಮೊಗ್ಗ ಗ್ರಾಮಾಂತರ 6, ಹಾಸನ 5 ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.