
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 11,958 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 27,07,481 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 340 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,920 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 27,299 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,36,716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,38,824 ಸಕ್ರಿಯ ಪ್ರಕರಣಗಳು ಇವೆ.
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಳಿಮುಖವಾಗಿದೆ. 199 ಮಂದಿ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 1992 ಜನರಿಗೆ ಸೋಂಕು ತಗುಲಿದೆ. ಇಂದು 11,488 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

