ನವದೆಹಲಿ: ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಗೆ ಮೊದಲು ಎಲ್ಲಾ ಶಿಕ್ಷಕರಿಗೆ ಆದ್ಯತೆಯ ಮೇಲೆ ಲಸಿಕೆ ನೀಡಬೇಕೆಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಶಿಕ್ಷಕರಿಗೆ ಲಸಿಕೆ ನೀಡುವಂತೆ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ತಿಳಿಸಿದ್ದಾರೆ.
ಶಿಕ್ಷಕರಿಗೆ ಲಸಿಕೆ ನೀಡಲು 2 ಕೋಟಿಗೂ ಅಧಿಕ ಹೆಚ್ಚುವರಿ ಲಸಿಕೆಯನ್ನು ರಾಜ್ಯಗಳಿಗೆ ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಕೊರೋನಾ ಸಂಖ್ಯೆ ಇಳಿಮುಖವಾಗುತ್ತಿದ್ದು, ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಶಿಕ್ಷಕರಿಗೆ ಲಸಿಕೆ ನೀಡಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.