ಬೆಂಗಳೂರು: ಕೊರೋನಾ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಮೂರರಿಂದ ನಾಲ್ಕು ದಿನದಲ್ಲಿ ಮುಖ್ಯಮಂತ್ರಿಯವರು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಮಕ್ಕಳಿಗೆ ಪ್ರತ್ಯೇಕ ಆರೈಕೆ ಕೇಂದ್ರ ತೆರೆಯಲಾಗುವುದು. ಕಂದಾಯ ಇಲಾಖೆಯಿಂದ ಆರೈಕೆ ಕೇಂದ್ರ ಆರಂಭಿಸಲಾಗುವುದು. ಎರಡು ದಿನದಲ್ಲಿ ಆರೈಕೆ ಕೇಂದ್ರಗಳ ಆರಂಭಕ್ಕೆ ಸೂಚನೆ ನೀಡಲಾಗಿದೆ. ಎರಡನೇ ಅಲೆಯಲ್ಲಿ ಆಗಿರುವ ತಪ್ಪನ್ನು ಪುನರಾವರ್ತಿಸುವುದಿಲ್ಲ. ಮೂರನೆಯ ಅಲೆ ಹೆಚ್ಚಾಗಲು ಬಿಡುವುದಿಲ್ಲ ಎಂದು ಅಶೋಕ್ ತಿಳಿಸಿದ್ದಾರೆ.