ಬೆಂಗಳೂರು: ಪಿಪಿಇ ಕಿಟ್ ಖರೀದಿಲೆಯಲ್ಲಿ 14 ಕೋಟಿ ರೂಪಾಯಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಬಿ. ಶ್ರೀರಾಮಲು ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸರ್ಕಾರ ಸಿದ್ಧತೆ ನಡೆಸಿದೆ.
330 ರೂಪಾಯಿಗೆ ಸಿಗುತ್ತಿದ್ದ ಪಿಪಿಇ ಕಿಟ್ ಗಳನ್ನು 2117 ರೂಪಾಯಿಗೆ ಖರೀದಿಸಿದ ಆರೋಪದ ಬಗ್ಗೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಕ್ರಿಮಿನಲ್ ಪ್ರಾಸಿಕ್ಯೂಷನ್ ನಡೆಸುವಂತೆ ಶಿಫಾರಸು ಮಾಡಿದೆ.
ಕೊರೊನಾ ಅವಧಿಯಲ್ಲಿ ಸಿಎಂ ಆಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಪಿಪಿಇ ಕಿಟ್ ಖರೀದಿಯಲ್ಲಿ 14.21 ಕೋಟಿ ರೂ. ಭ್ರಷ್ಟಾಚಾರ ಎಸಗಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ನಡೆಸುವಂತೆ ನ್ಯಾಯಮೂರ್ತಿ ಕುನ್ಹಾ ಆಯೋಗ ಶಿಫಾರಸು ಮಾಡಿದೆ. ಇದರ ಬೆನ್ನಲ್ಲೇ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ಗೆ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.