alex Certify BIG NEWS: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 784 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,24,137 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 1238 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,02,817 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು ಆರು ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,124 ಜನ ಸಾವನ್ನಪ್ಪಿದ್ದಾರೆ. 9177 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 437 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 3,90,785 ಕ್ಕೆ ಏರಿಕೆಯಾಗಿದೆ. ಇಂದು 902 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,80,769 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4336 ಜನ ಸಾವನ್ನಪ್ಪಿದ್ದಾರೆ. 5679 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...