alex Certify ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, ಇಂದು 653 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, ಇಂದು 653 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಭಾರಿ ಇಳಿಮುಖವಾಗಿದ್ದು, 653 ಜನರಿಗೆ ಹೊಸದಾಗಿ ಸೋಂಕು ತಗುಲಿರುವ ವರದಿ ಬಂದಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,16,909 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1178 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,92,273 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 8 ಮಂದಿ ಸೋಂಕಿತರ ಮೃತಪಟ್ಟಿದ್ದು, ಇದುವರೆಗೆ 12,070 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 12,547 ಸಕ್ರಿಯ ಪ್ರಕರಣಗಳಿದ್ದು, 205 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 309 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸಂಖ್ಯೆ 3,86,908 ಕ್ಕೆ  ಏರಿಕೆಯಾಗಿದ್ದು, ಇವತ್ತು 654 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,74,378 ಜನ ಬಿಡುಗಡೆಯಾಗಿದ್ದು, 8225 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 5 ಜನರು ಮೃತಪಟ್ಟಿದ್ದು, ಇದುವರೆಗೆ 4304 ಜನ ಸಾವನ್ನಪ್ಪಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...