alex Certify ರಾಜ್ಯದಲ್ಲಿಂದು 383 ಜನರಿಗೆ ಸೋಂಕು, 6062 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 383 ಜನರಿಗೆ ಸೋಂಕು, 6062 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 383 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು 378 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,30,465 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,303 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,48,849 ಕ್ಕೆ ಏರಿಕೆಯಾಗಿದೆ. 6062 ಸಕ್ರಿಯ ಪ್ರಕರಣಗಳಿದ್ದು, 122 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 240 ಜನರಿಗೆ ಕೊರೋನಾ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 4,04,183 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 240 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,95,344 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 4380 ಸಕ್ರಿಯ ಪ್ರಕರಣಗಳಿದ್ದು ಇವತ್ತು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 4458 ಜನ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...