ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸ್ಪೋಟವಾಗಿದ್ದು ಹೊಸದಾಗಿ 2010 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,73,657 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 677 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,45,594 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇವತ್ತು ಒಂದೇ ದಿನ 5 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,449 ಜನ ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,595 ಏರಿಕೆಯಾಗಿದ್ದು, 136 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸ್ಫೋಟವಾಗಿ ಒಂದೇ ದಿನ ಬರೋಬ್ಬರಿ 1280 ಜನರಿಗೆ ಸೋಂಕು ತಗುಲಿದೆ. ಇವತ್ತು ಮೂವರು ಸೋಂಕಿತರು ಮೃತಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10,766 ಕ್ಕೆ ಏರಿಕೆಯಾಗಿದೆ.