alex Certify BIG BREAKING NEWS: ರಾಜ್ಯದಲ್ಲಿ 5638 ಸೋಂಕಿತರಿಗೆ ಚಿಕಿತ್ಸೆ, ಇಂದು 523 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿ 5638 ಸೋಂಕಿತರಿಗೆ ಚಿಕಿತ್ಸೆ, ಇಂದು 523 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 523 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು 380 ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,32,747 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ 5638 ಸಕ್ರಿಯ ಪ್ರಕರಣಗಳು ಇವೆ. ಇವತ್ತು ಒಂದೇ ದಿನ ಆರು ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,326 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,50,730 ಕ್ಕೆ ಏರಿಕೆಯಾಗಿದೆ. 121 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 329 ಜನರಿಗೆ ಸೋಂಕು ತಗುಲಿದ್ದು, 243 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3835 ಸಕ್ರಿಯ ಪ್ರಕರಣಗಳು ಇವೆ. ಇಂದು ಬೆಂಗಳೂರಿನಲ್ಲಿ 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4,05,325 ಕ್ಕೆ ಏರಿಕೆಯಾಗಿದೆ. ಇದುವರೆಗೆ 3,97,015 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 4474 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...