alex Certify ಕೊರೋನಾ ಭಾರೀ ಇಳಿಕೆ, 438 ಜನರಿಗೆ ಸೋಂಕು -5860 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಭಾರೀ ಇಳಿಕೆ, 438 ಜನರಿಗೆ ಸೋಂಕು -5860 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 438 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ. ಒಟ್ಟು ಸೋಂಕಿತರ ಸಂಖ್ಯೆ 9,46,076 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 344 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 9,27,924 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು ಒಂದೇ ದಿನ ಆರು ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,273 ಮಂದಿ ಸಾವನ್ನಪ್ಪಿದ್ದಾರೆ. 125 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5860 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 306 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 4,02,518 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 133 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,94,016 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4067 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 4434 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...