alex Certify ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 877 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 877 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 877 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,20,373 ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ ಒಂದೇ ದಿನ ಆರು ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,096 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 1084 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,97,200 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 11,058 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಕೊರೋನಾ ಇಳಿಕೆಯಾಗಿದ್ದು, ಇವತ್ತು ಒಂದೇ ದಿನ 464 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಸೋಂಕಿತರ ಸಂಖ್ಯೆ 3,88,850 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ನಾಲ್ವರು ಮೃತಪಟ್ಟಿದ್ದು, ಇದುವರೆಗೆ 4321 ಜನ ಸಾವನ್ನಪ್ಪಿದ್ದಾರೆ. ಇಂದು 608 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 3,77,443 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7085 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...