
ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಪತ್ನಿ, ಅಳಿಯ ಮತ್ತು ಅವರ ನಿವಾಸದ ಸಿಬ್ಬಂದಿ ಸೇರಿದಂತೆ 5 ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಅವರೆಲ್ಲರು ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿದ್ದಾರೆ.
ಸಚಿವ ಬಿ.ಸಿ. ಪಾಟೀಲ್ ಅವರು ಈ ಕುರಿತು ಸ್ಪಷ್ಟಪಡಿಸಿದ್ದು, ನನ್ನ ಶ್ರೀಮತಿ, ಅಳಿಯ ಮತ್ತು ಹಿರೇಕೆರೂರು ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಐವರಿಗೆ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದು ತಿಳಿಸಿದ್ದಾರೆ.