ಬೆಂಗಳೂರು: ರಾಜ್ಯದಲ್ಲಿಂದು 1446 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,89,113 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 13 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,821 ಜನ ಸಾವನ್ನಪ್ಪಿದ್ದಾರೆ. 8,52,584 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 24,689 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 758 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,71,962 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 6 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 4162 ಕ್ಕೆ ಏರಿಕೆಯಾಗಿದೆ. 3,48,861 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 18,938 ಜನ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.