alex Certify BREAKING: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ, ಬೆಂಗಳೂರಲ್ಲೂ ಇಳಿಮುಖ -ಇಂದು 2756 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ, ಬೆಂಗಳೂರಲ್ಲೂ ಇಳಿಮುಖ -ಇಂದು 2756 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 2756 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,32,396 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 26 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,247 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 7140 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 7,80,735 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 40,395 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಕೂಡ ಕೊರೋನಾ ಇಳಿಮುಖವಾಗಿದ್ದು, ಇವತ್ತು 1479 ಜನರಿಗೆ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,41,554 ಏರಿಕೆಯಾಗಿದೆ. ಇಂದು 4868 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 3,14,956 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಲ್ಲಿ 22,696 ಸಕ್ರಿಯ ಪ್ರಕರಣಗಳಿವೆ. ಇವತ್ತು 13 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 3901 ಜನ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...