ಬೆಂಗಳೂರು: ರಾಜ್ಯದಲ್ಲಿ ಇಂದು 1630 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 8,78,055 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 19 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,714 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,41,432 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 24,890 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 916 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಡಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3,66,233 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 11 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4101 ಜನ ಸಾವನ್ನಪ್ಪಿದ್ದಾರೆ. 3,43,771 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 18,360 ಸಕ್ರಿಯ ಪ್ರಕರಣಗಳಿವೆ.