ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೊನಾ ಮೂರನೇ ಸೋಂಕು ಮಕ್ಕಳಲ್ಲೂ ಕಾಣಿಸಿಕೊಳ್ತಿದೆ. 15 ವರ್ಷ ಕೆಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಬರದ ಕಾರಣ ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಮಕ್ಕಳಲ್ಲಿ ಕೊರೊನಾ ವೈರಸ್ ಸೋಂಕು ಸೌಮ್ಯ ರೋಗಲಕ್ಷಣಗಳೊಂದಿಗೆ ಪ್ರಾರಂಭವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ. ತಕ್ಷಣ ಮಕ್ಕಳಿಗೆ ಚಿಕಿತ್ಸೆ ಸಿಕ್ಕಲ್ಲಿ, ಅಪಾಯದಿಂದ ಮಕ್ಕಳನ್ನು ರಕ್ಷಿಸಬಹುದೆಂದು ತಜ್ಞರು ಹೇಳಿದ್ದಾರೆ.
ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ, ಗಂಟಲು ನೋವು, ಶೀತ, ಕೀಲು ನೋವು, ತಲೆನೋವು ಸಾಮಾನ್ಯವಾಗಿ ಮಕ್ಕಳಲ್ಲಿ ಕಾಡುವ ಕೊರೊನಾ ಲಕ್ಷಣಗಳಾಗಿವೆ. ಇನ್ನು ಎಂಟು ವರ್ಷ ಮೇಲ್ಪಟ್ಟ ಮಕ್ಕಳಲ್ಲಿ ಬಾಯಿ ರುಚಿ ಹಾಗೂ ವಾಸನೆ ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
ವಾಂತಿ, ಅತಿಸಾರ, ಸುಸ್ತು ಕೂಡ ಕೊರೊನಾ ಲಕ್ಷಣವಾಗಿದೆ. ಕೊರೊನಾ ವೈರಸ್ ಗೆ ತುತ್ತಾದ ಕೆಲ ಮಕ್ಕಳಲ್ಲು ಊತ ಕಾಣಿಸಿಕೊಂಡಿದೆ ಇದನ್ನು ತಜ್ಞರು ಮಲ್ಟಿಸಿಸ್ಟಮ್ ಇನ್ಫ್ಲಾಮೇಟರಿ ಸಿಂಡ್ರೋಮ್ ಎಂದಿದ್ದಾರೆ. ಈ ಸಮಸ್ಯೆಯಿಂದ ಬಳಲುವ ಮಗುವಿಗೆ ಉಸಿರಾಡಲು ಕಷ್ಟವಾಗಬಹುದು. ಎದೆ ನೋವು ಕಾಣಿಸಿಕೊಳ್ಳಬಹುದು. ತುಟಿಗಳು ನೀಲಿಯಾಗಬಹುದು. ಅಂತಹ ರೋಗಲಕ್ಷಣ ಕಂಡು ಬಂದಲ್ಲಿ ನಿರ್ಲಕ್ಷ್ಯಿಸಿದೆ ತಕ್ಷಣ ವೈದ್ಯರನ್ನು ಭೇಟಿಯಾಗುವುದು ಒಳ್ಳೆಯದು. ಚಿಕಿತ್ಸೆಯಿಂದ ಇದನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳಿದ್ದಾರೆ.