alex Certify ಕೊರೋನಾ ಲಸಿಕೆ ವಿತರಣೆಗೆ ಮೋದಿ ಮೆಗಾ ಪ್ಲಾನ್: ಮುಖ್ಯಮಂತ್ರಿಗಳೊಂದಿಗೆ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಲಸಿಕೆ ವಿತರಣೆಗೆ ಮೋದಿ ಮೆಗಾ ಪ್ಲಾನ್: ಮುಖ್ಯಮಂತ್ರಿಗಳೊಂದಿಗೆ ಚರ್ಚೆ

ನವದೆಹಲಿ: ಸದ್ಯವೇ ಬಳಕೆಗೆ ಸಿಗಲಿರುವ ಕೊರೋನಾ ಲಸಿಕೆ ಸಮರ್ಪಕ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಮಾಹಿತಿ ಸಂಗ್ರಹಿಸಲಾಗಿದೆ.

ಲಸಿಕೆ ದಾಸ್ತಾನು, ಸರಬರಾಜು ಮಾಡಲು ಸಿದ್ಧತೆ ಕೈಗೊಳ್ಳಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ದೊರೆಯುತ್ತಿದ್ದಂತೆ ಲಸಿಕೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ 12 ಗಂಟೆಗೆ 8 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ.

ಅತಿ ಹೆಚ್ಚು ಕೊರೋನಾ ಸೋಂಕಿತರು ಇರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೊದಲ ಹಂತದಲ್ಲಿ ಸಭೆ ನಡೆಸಲಿರುವ ಅವರು ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಲಸಿಕೆ ದಾಸ್ತಾನು, ನೀಡಿಕೆಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸಲಹೆ ನೀಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...