ಕೊರೊನಾದ ಎರಡನೇ ಅಲೆ, ದೇಶಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದಿದೆ. ಈಗ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಈ ಅಪಾಯಕಾರಿ ವೈರಸ್ ಶ್ವಾಸಕೋಶದ ಮೇಲೆ ದಾಳಿ ಮಾಡುವುದು ಮಾತ್ರವಲ್ಲ, ಇಡೀ ದೇಹಕ್ಕೆ ಸಮಸ್ಯೆಯುಂಟು ಮಾಡುತ್ತದೆ. ಕೊರೊನಾ ಸೋಂಕಿತ ರೋಗಿಗಳು ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿದ್ದಾರೆ. ಕೊರೊನಾದಿಂದ ಚೇತರಿಸಿಕೊಂಡ ನಂತರವೂ ರೋಗಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಕೊರೊನಾದಿಂದ ಇದುವರೆಗೆ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈಗಲೂ ದೇಶಾದ್ಯಂತ ಮೂರುವರೆ ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.
ಕೊರೊನಾದಿಂದ ಚೇತರಿಸಿಕೊಂಡ ನಂತರವೂ ಜನರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಗಂಭೀರವಾದ ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಇದು ಅನೇಕ ಆಂತರಿಕ ಅಂಗಗಳ ಮೇಲೆ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈಗಾಗಲೇ ಬೇರೆ ಕಾಯಿಲೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಉರಿಯೂತವು ಶ್ವಾಸಕೋಶ ಮತ್ತು ಎದೆಯಂತಹ ಪ್ರಮುಖ ಅಂಗಗಳಿಗೆ ವ್ಯಾಪಕ ಹಾನಿಯನ್ನು ಉಂಟುಮಾಡಬಹುದು. ರೋಗಿಗಳ ಉಸಿರಾಟ ಸಾಮಾನ್ಯ ಸ್ಥಿತಿಗೆ ಬರಲು ಸಮಯ ತೆಗೆದುಕೊಳ್ಳುತ್ತದೆ.
ದೀರ್ಘಕಾಲ ಐಸಿಯುನಲ್ಲಿದ್ದು ಬಂದ ರೋಗಿಗಳಿಗೆ ವೈದ್ಯರ ಹೆಚ್ಚಿನ ಸಲಹೆಯ ಅಗತ್ಯವಿದೆ. ಕೊರೊನಾ ಕಡಿಮೆಯಾದ್ರೂ ಅವರು ವೈದ್ಯರನ್ನು ಆಗಾಗ ಸಂಪರ್ಕಿಸುವುದು ಒಳ್ಳೆಯದು.