ಬೆಂಗಳೂರು: ನಿಗಮ –ಮಂಡಳಿ ನೇಮಕಾತಿ ಜತೆಯಲ್ಲೇ ನಗರಾಭಿಭಿವೃದ್ಧಿ ಇಲಾಖೆ ವ್ಯಾಪ್ತಿಯ 32 ಯೋಜನಾ ಪ್ರಾಧಿಕಾರಗಳಿಗೆ ಸದಸ್ಯರನ್ನು ನೇಮಕ ಮಾಡುವ ಹೊಣೆಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗೆ ವಹಿಸಲಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಬೈರತಿ ಸುರೇಶ್ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 32 ಯೋಜನಾ ಪ್ರಾಧಿಕಾರಗಳಿಗೆ 150 ಸದಸ್ಯರ ನೇಮಕಾತಿ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿಗಮ -ಮಂಡಳಿ ನೇಮಕಾತಿ ಬೆನ್ನಲ್ಲೇ ನಗರಾಭಿವೃದ್ಧಿ ಪ್ರಾಧಿಕಾರಗಳ ಸದಸ್ಯರ ನೇಮಕ ಮಾಡಬೇಕು. ಈ ನಿಟ್ಟಿನಲ್ಲಿ ಪಟ್ಟಿ ಸಿದ್ಧಪಡಿಸುವ ಕುರಿತಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.