ಕಳೆದ ಶುಕ್ರವಾರ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಬೆಳಗಾವಿಯಲ್ಲಿ 18 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಕ್ಷೇತರರ ಆರಂಭಿಕ ಮುನ್ನಡೆ ಗಳಿಸಿದ್ದು, ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಹಿನ್ನಡೆಯಲ್ಲಿದ್ದಾರೆ. ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು 18 ಕಡೆ ಮುನ್ನಡೆ ಗಳಿಸಿದ್ದಾರೆ
ಹುಬ್ಬಳ್ಳಿಯಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ ಸಿಕ್ಕಿದೆ. ಕಲ್ಬುರ್ಗಿಯಲ್ಲಿ ಕಾಂಗ್ರೆಸ್ ಮುನ್ನಡೆ ಗಳಿಸಿದ್ದು, ಮೂರು ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.