alex Certify ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಒಂದು ವರ್ಷ ಜೈಲು ಶಿಕ್ಷೆ, ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಒಂದು ವರ್ಷ ಜೈಲು ಶಿಕ್ಷೆ, ದಂಡ

ಧಾರವಾಡ: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ ಪ್ರಕರಣದಲ್ಲಿ ಭ್ರಷ್ಟ ಅಧಿಕಾರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರಾಗಿದ್ದ ನೂರ್ ಅಹಮದ್ ಖಾನ್ ಶಿಕ್ಷೆಗೆ ಒಳಗಾದವರು. ಧಾರವಾಡ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ ನೂರ್ ಅಹಮ್ಮದ್ ಖಾನ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ, 25,000 ರೂ. ದಂಡ ವಿಧಿಸಿದೆ.

2010ರ ನವೆಂಬರ್ 15 ರಂದು ನೂರ್ ಅಹ್ಮದ್ ಖಾನ್ ನಿವಾಸದ ಮೇಲೆ ಧಾರವಾಡ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...