ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರದ ಅಂಗಡಿ ಓಪನ್ ಮಾಡಿದ್ದಾರೆ. ಒಬ್ಬೊಬ್ಬ ಅಧಿಕಾರಿಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ದಾರೆ. ಯಾವುದೇ ಇಲಾಖೆ ತೆಗೆದುಕೊಳ್ಳಿ ಅಲ್ಲಿ ಭ್ರಷ್ಟಾಚರ ಹೆಚ್ಚಾಗಿದೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಡೆಸುತ್ತಿರುವ ಭ್ರಷ್ಟಾಚಾರದ ಅಂಗಡಿಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ.ಅಧಿಕಾರಿಗಳು, 1 ಕೋಟಿ, 2 ಕೋಟಿ ರೂ. ರೂ. ಲಂಚ ಕೇಳುತ್ತಾರೆ ಎಂದು ಗುತ್ತಿಗೆದಾರರು ಆರೋಪಿಸುತ್ತಿದ್ದಾರೆ ಎಂದರು.