ಸಪೋಟಾ ಹಣ್ಣು ಪೌಷ್ಟಿಕಾಂಶದಿಂದ ಕೂಡಿದೆ. ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಮಾತ್ರವಲ್ಲ ಚರ್ಮ ಮತ್ತು ಕೂದಲಿನ ಸೌಂದರ್ಯವನ್ನು ಹೆಚ್ಚಿಸಲು ಇದು ಸಹಕಾರಿ. ಹಾಗಾಗಿ ಸಪೋಟಾವನ್ನು ಚರ್ಮ ಮತ್ತು ಕೂದಲಿನ ಸೌಂದರ್ಯಕ್ಕಾಗಿ ಹೇಗೆ ಬಳಸಬೇಕು ಎಂಬುದನ್ನು ತಿಳಿದುಕೊಳ್ಳಿ.
*1 ಚಮಚ ಸಪೋಟಾ ತಿರುಳನ್ನು ತೆಗೆದುಕೊಂಡು ಅದಕ್ಕೆ 1 ಚಮಚ ಹಾಲು, 1 ಚಮಚ ಕಡಲೆಹಿಟ್ಟನ್ನು ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ. ಇದನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ. ಒಣಗಿದ ಬಳಿಕ ಉಗುರ ಬೆಚ್ಚನೆ ನೀರಿನಲ್ಲಿ ತೊಳೆಯಿರಿ. ಇದನ್ನು ವಾರಕ್ಕೆ 2 ಬಾರಿ ಬಳಸುವುದರಿಂದ ಚರ್ಮವು ಕಾಂತಿಯುಕ್ತವಾಗುತ್ತದೆ.