ನವದೆಹಲಿ: ನ. 16 ರೊಳಗೆ ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶಕ್ಕೆ ನಡೆಸುವ ಎರಡನೇ ಸುತ್ತಿನ ನೀಟ್ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ನವೆಂಬರ್ 16 ರ ಗಡುವು ನೀಡಲಾಗಿದೆ. ಈ ಕುರಿತ ಅಂಕಿ ಅಂಶಗಳನ್ನು ಅದೇ ದಿನ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿಗೆ ಸಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ನೀಟ್ ಪಿಜಿ ಎರಡನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಕೇಂದ್ರ ಸರ್ಕಾರ ಕೊನೆಯ ಸುತ್ತಿನ ಕೌನ್ಸೆಲಿಂಗ್ ನಡೆಸಬಹುದು. ಹೀಗಾಗಿ ಎರಡನೇ ಸುತ್ತಿನ ನೀಟ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನವೆಂಬರ್ 16ರೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದೆ.