
ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತಎಣಿಕೆ ಆರಂಭವಾಗುತ್ತಿದ್ದಂತೆ ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಬಿಜೆಪಿ ಮುನ್ನಡೆ ಗಳಿಸಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಗಳಿಸಿದೆ.
ಅಂಚೆ ಮತಗಳ ಎಣಿಕೆ ಆರಂಭವಾಗುತ್ತಿದ್ದಂತೆ ಉತ್ತರ ಪ್ರದೇಶದಲ್ಲಿ ಬಿಜೆಪಿ 35, ಸಮಾಜವಾದಿ ಪಕ್ಷ 27 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.
ಪಂಜಾಬ್ ನಲ್ಲಿ ಆಪ್ 4, ಶಿರೋಮಣಿ ಅಕಾಲಿದಳ 1, ಕಾಂಗ್ರೆಸ್ 1 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.
ಉತ್ತರಾಖಂಡ್ ನಲ್ಲಿ ಬಿಜೆಪಿ 5, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಗೋವಾದಲ್ಲಿ 3 ಕಡೆಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದೆ.