
ಇದಕ್ಕೆ ಸೇರ್ಪಡೆ ಎಂಬಂತೆ ಮತ್ತೊಂದು ಇಂತಹ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಈ ಯುವ ಜೋಡಿ ಮೊದಲಿಗೆ ತಾವು ನಿಂತಿದ್ದ ಸ್ಥಳದಲ್ಲಿ ಸರಸ ಸಲ್ಲಾಪ ನಡೆಸಿದೆ. ಇದು ಸಾಲದೆಂಬಂತೆ ಮತ್ತೆ ಸೀಟಿನಲ್ಲಿ ಕುಳಿತಾಗಲೂ ಇದನ್ನೇ ಮುಂದುವರಿಸಿದೆ. ಸಹ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಇರಬೇಕಾದ ಇಂತಹ ಪ್ರೀತಿ ಮಕ್ಕಳು, ಮಹಿಳೆಯರು, ವೃದ್ಧರು ಓಡಾಡುವಂತಹ ಮೆಟ್ರೋದಲ್ಲಿ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಮತ್ತಷ್ಟು ಮಂದಿ ಈ ಯುವ ಜೋಡಿಯ ಖಾಸಗಿ ಕ್ಷಣಗಳನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಸಾರ್ವಜನಿಕಗೊಳಿಸಿರುವುದು ಸರಿಯಲ್ಲ ಎಂದು ಅಪಸ್ವರ ಎತ್ತಿದ್ದಾರೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು ಹೇಳಿ.