ಉಡುಪಿ: ಉಡುಪಿಯಲ್ಲಿ ಬೆಂಗಳೂರಿನ ದಂಪತಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಡುಪಿಯಲ್ಲೇ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದರು. ಮಕ್ಕಳ ಮೃತದೇಹ ನೋಡಲು ಪೋಷಕರು ಓಡೋಡಿ ಬಂದಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹಗಳಿವೆ. ಉಡುಪಿಯಲ್ಲಿ ಶವಸಂಸ್ಕಾರ ಮಾಡಲು ಪೋಷಕರು ನಿರ್ಧರಿಸಿದ್ದಾರೆ. ಮೃತ ಯಶವಂತ ಯಾದವ್ ಮತ್ತು ಜ್ಯೋತಿ ಪೋಷಕರು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಉಡುಪಿ ಸ್ಮಶಾನದಲ್ಲಿ ಇಂದು ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಹೇಳಲಾಗಿದೆ.