ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಕೊಯನಾಡಿನ ಚಡಾವು ಬಳಿ ನಡೆದಿದೆ.
ನೆಲ್ಲಿಹುದಿಕೇರಿಯ ಚಿದಾನಂದ ಆಚಾರ್ಯ(48), ಅವರ ಪತ್ನಿ ನಳಿನಿ(40) ಮೃತಪಟ್ಟವರು. ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಿದಾನಂದ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದು, ನಳಿನಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತರು 14 ವರ್ಷದ ಓರ್ವ ಪುತ್ರನನ್ನು ಅಗಲಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.