ಆಗ್ರಾ: ಮಹಾ ಕುಂಭ ಮೇಳದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಕುಟುಂಬವೊಂದು ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಈ ದುರಂತ ಸೋಮವಾರ ಆಗ್ರಾದ ಚಿತ್ರಾಹಟ್ ಪ್ರದೇಶದ ಸಹಾಯಪುರ ಗ್ರಾಮದ ಬಳಿ ಸಂಭವಿಸಿದೆ.
ಮೃತಪಟ್ಟವರನ್ನು ಮಹೇಂದ್ರ ಪ್ರತಾಪ್ (50) ಮತ್ತು ಅವರ ಪತ್ನಿ ಭೂರಿ ದೇವಿ (48) ಎಂದು ಗುರುತಿಸಲಾಗಿದೆ. ಅವರೆಲ್ಲಾ ಆಗ್ರಾ ಜಿಲ್ಲೆಯ ರಸೂಲಾಬಾದ್ ಗ್ರಾಮದ ನಿವಾಸಿಗಳು. ಕುಂಭ ಮೇಳದಲ್ಲಿ ಪಾಲ್ಗೊಂಡು ತಮ್ಮ ಗ್ರಾಮಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ.
ಚಿತ್ರಾಹಟ್ ಪೊಲೀಸ್ ಠಾಣೆಯ ಎಸ್ಎಚ್ಒ ರುದ್ರ ಪ್ರತಾಪ್ ಸಿಂಗ್, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಟ್ರಕ್ ಚಾಲಕ ಹಾಗೂ ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಕುಂಭ ಮೇಳ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಘಟನೆಯಿಂದಾಗಿ ಮೃತರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.