
ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಒಂದೂವರೆ ವರ್ಷದ ಮಗುವನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28), ತನುಶ್ರೀ(24) ಆತ್ಮಹತ್ಯೆ ಮಾಡಿಕೊಂಡವರು. ಒಂದೂವರೆ ವರ್ಷದ ಮಗುವಿಗೆ ವಿಷವುಣಿಸಿ ಕೊಲೆ ಮಾಡಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನಲ್ಲಿ ಬರೆದಿಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಇವರು ಪ್ರೀತಿಸಿ ಮದುವೆಯಾಗಿದ್ದರು. ಅನ್ಯೋನ್ಯವಾಗಿದ್ದ ದಂಪತಿ ಇಂತಹ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.