ಮೈಸೂರು: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಚಾಮುಂಡಿ ಬಡಾವಣೆಯಲ್ಲಿ ನಡೆದಿದೆ.
ಮಹದೇವಸ್ವಾಮಿ, ಪತ್ನಿ ಅನಿತಾ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮಹದೇವಸ್ವಾಮಿ ಆರ್ ಎಂಸಿಯಲ್ಲಿ ದಲ್ಲಾಳಿಯಾಗಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.