alex Certify ರೈತರ ಮಕ್ಕಳಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಶಿಷ್ಯವೇತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಮಕ್ಕಳಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಶಿಷ್ಯವೇತನ

ಬೀದರ: ರಾಜ್ಯ ಕೃಷಿ ಇಲಾಖೆ ವತಿಯಿಂದ ರೈತ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ.

ಎಸ್.ಎಸ್.ಎಲ್.ಸಿ ಅಥವಾ  10ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ, ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ಪ್ರವೇಶವನ್ನು ಪಡೆದಿರುವ  ಕರ್ನಾಟಕ ರಾಜ್ಯದ ರೈತರ ಅರ್ಹ ಮಕ್ಕಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021 -22 ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತೆ ವಾರ್ಷಿಕ ಶಿಷ್ಯವೇತನ ರೂಪದಲ್ಲಿ ಒದಗಿಸಲಾಗುವುದು.

ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ 25೦೦ ರೂ., ವಿದ್ಯಾರ್ಥಿನಿಯರಿಗೆ 3೦೦೦ ರೂ.,

ಬಿ.ಎ, ಬಿ.ಎಸ್ಸಿ, ಬಿ.ಕಾಂ, ಇತ್ಯಾದಿ ವಿದ್ಯಾರ್ಥಿಗಳಿಗೆ 5೦೦೦ ರೂ., ವಿದ್ಯಾರ್ಥಿನಿಯರಿಗೆ 55೦೦ ರೂ.

ಎಲ್.ಎಲ್.ಬಿ., ಪ್ಯಾರಾ ಮೆಡಿಕಲ್, ಬಿ.ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ಗ ಗಳ ವಿದ್ಯಾರ್ಥಿಗಳಿಗೆ 75೦೦ ರೂ., ವಿದ್ಯಾರ್ಥಿನಿಯರಿಗೆ 8೦೦೦ ರೂ.

ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಯರಿಗೆ 1೦,೦೦೦ ರೂ., ವಿದ್ಯಾರ್ಥಿನಿಯರಿಗೆ 11,೦೦೦ ರೂ. ಮೊತ್ತದ ಶಿಷ್ಯ ವೇತನ ಪ್ರಕಟಿಸಲಾಗಿದೆ.

ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೋಷಕ/ಪೋಷಕರು ಇಲ್ಲದೆ ಇದ್ದ ಸಂದರ್ಭದಲ್ಲಿ ಉಳುಮೆ ಮಾಡುವಂತಹ/ಕೃಷಿ ಮಾಡುವಂತಹ ಜಮೀನನ್ನು ಅವರು ಹೊಂದಿರತಕ್ಕದ್ದು. ಈ ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ. ಆದರೆ, ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ‍್ಯಾಂಕ್ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ಶಿಷ್ಯವೇತನ/ಪ್ರಶಸ್ತಿ/ಪ್ರತಿಫಲ ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ, ಈ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ರೈತರ ಮಕ್ಕಳ ತಂದೆ, ತಾಯಿ ಇಬ್ಬರೂ ಕೃಷಿ ಜಮೀನಿನ ಒಡೆಯರಾಗಿದ್ದರೆ, ಈ ಯೋಜನೆಯಲ್ಲಿ ಒಂದು ಶಿಷ್ಯವೇತನಕ್ಕೆ ಮಾತ್ರ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಸ್ಟರ್/ ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತಕ್ಕದ್ದು. ಕೋರ್ಸ್ನ ಸೆಮಿಸ್ಟರ್‌ನಲ್ಲಿ/ ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ ಪುನಃ ಆ ಸೆಮಿಸ್ಟರ್/ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾದರೆ(ಪುನಃ ಪರೀಕ್ಷೆ ತೆಗೆದುಕೊಂಡರೆ) ವಿದ್ಯಾರ್ಥಿಗಳು ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ. ಈ ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್ಗೆ ನೀಡಲಾಗುವುದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...