ಬೆಂಗಳೂರು: ಖಾಸಗಿ ಅನುದಾನರಹಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೋರ್ಸುಗಳ ಪ್ರವೇಶ ಶುಲ್ಕವನ್ನು ಶೇಕಡ 10ರಷ್ಟು ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ.
ಅನುದಾನರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿ, ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಅನುದಾನರಹಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶ ಶುಲ್ಕವನ್ನು ಶೇಕಡ 10ರಷ್ಟು ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎರಡು ವರ್ಷಗಳಿಂದ ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿರಲಿಲ್ಲ. ಶೇಕಡ 25 ರಷ್ಟು ಸ್ವಲ್ಪ ಹೆಚ್ಚಳಕ್ಕೆ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಬೇಡಿಕೆ ಇಟ್ಟಿದ್ದು, ಶೇಕಡ 10ರಷ್ಟು ಹೆಚ್ಚಳಕ್ಕೆ ಸಮ್ಮತಿ ಸೂಚಿಸಲಾಗಿದೆ. ನಿಗದಿತ ಶುಲ್ಕ ಹೊರತಾಗಿ ವಿದ್ಯಾರ್ಥಿಗಳಿಂದ ಯಾವುದೇ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ ಎಂದು ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.