ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ದಾಖಲಿಸಲು ಸೆಪ್ಟೆಂಬರ್ 4ರಂದು ಮಧ್ಯಾಹ್ನ 12 ಗಂಟೆಯವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಇಎ) ಅವಕಾಶ ನೀಡಿದೆ.
ಸೆಪ್ಟೆಂಬರ್ 3ರವರೆಗೆ 92,000 ಅಭ್ಯರ್ಥಿಗಳು ಆಯ್ಕೆ ಪೂರ್ಣಗೊಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಸುಮಾರು 15,000 ಅಭ್ಯರ್ಥಿಗಳು ಇನ್ನು ಚಾಯ್ಸ್ ದಾಖಲು ಮಾಡಿಲ್ಲ. ಶುಲ್ಕ ಪಾವತಿಗೆ ಸಂಜೆ 4 ಗಂಟೆವರೆಗೆ ಅವಕಾಶವಿದೆ. ನಿಗದಿತ ಅವಧಿಯೊಳಗೆ ದಾಖಲು ಮಾಡಿಕೊಳ್ಳದಿದ್ದರೆ ಅಂತಹ ಅಭ್ಯರ್ಥಿಗಳ ಸೀಟು ರದ್ದಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.