alex Certify ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಲೆ ಮಾಡಿದ್ದ 9 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿದಂತೆ 9 ಮಂದಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕೊಲೆ ನಡೆದ 10 ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಿದ ಕೋರ್ಟ್ ತೀರ್ಪು ಪ್ರಕಟಿಸಿದೆ. ಕಲಬುರಗಿ ಜೈಲಿನಲ್ಲಿದ್ದ ಯಾಚೇನಹಳ್ಳಿ ಚೇತು ಕೊಲೆ ಮಾಡಿಸಿದ್ದ. ಮಂಡ್ಯ ಶಿವು ಅಲಿಯಾಸ್ ಶಿವಕುಮಾರ್, ಉಲಿವಾಲ ಚೇತು, ರಾಕಿ ಸೇರಿದಂತೆ 9 ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮತ್ತಿಬ್ಬರು ಅಪರಾಧಿಗಳಿಗೆ ತಲಾ 2.5 ವರ್ಷ ಶಿಕ್ಷೆ ವಿಧಿಸಿದೆ. ಇನ್ಸ್ ಪೆಕ್ಟರ್ ಕೆ.ಎಂ. ವಸಂತ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚನ್ನರಾಯಪಟ್ಟಣ ಟೌನ್ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...