ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆ ಕಿಡ್ನಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಶುಕ್ರವಾರ ಪ್ರಕಟವಾಗಲಿದೆ.
ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಬಂಧನಕ್ಕೊಳಗಾಗಿ ಜಾಮೀನು ಪಡೆದುಕೊಂಡಿದ್ದಾರೆ. ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಲಿದೆ.
ಕೋರ್ಟ್ ನಿರೀಕ್ಷಣಾ ಜಾಮೀನು ನೀಡದಿದ್ದಲ್ಲಿ ಭವಾನಿ ರೇವಣ್ಣ ಜೈಲು ಸೇರಬೇಕಾಗುತ್ತದೆ. ಇಂದಿನ ಕೋರ್ಟ್ ತೀರ್ಪಿನ ಕುರಿತಾಗಿ ಕುತೂಹಲ ಹೆಚ್ಚಾಗಿದೆ.