ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆಸಿದ್ದ ಜಾತಿಗಣತಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇದೇ ಹೊತ್ತಲ್ಲಿ ಒಕ್ಕಲಿಗ -ಲಿಂಗಾಯತ ವೇದಿಕೆ ಜಾತಿಗಣತಿಗೆ ಆಕ್ಷೇಪ ವ್ಯಕ್ತಪಡಿಸಿದೆ.
ಜಾತಿಗಣತಿ ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಟ್ಟಿದೆ. ಇದರಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಗಣತಿಯ ಹೆಸರಿನಲ್ಲಿ ಅಧಿಕಾರ, ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರ ವಿರುದ್ಧ ಹೈಕೋರ್ಟ್ ಮೊರೆ ಹೋಗುವುದಾಗಿ ಹೇಳಲಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಜಾತಿಗಣತಿ ಹೆಸರಲ್ಲಿ ರಾಜಕೀಯ ದುರ್ಲಾಭ ಗಳಿಕೆಯ ಷಡ್ಯಂತ್ರದ ಬಗ್ಗೆ ಒಂದು ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಒಕ್ಕಲಿಗ –ವೀರಶೈವ ಲಿಂಗಾಯತ ಸೌಹಾರ್ದ ವೇದಿಕೆಯ ಮುಖಂಡರು, ಜಾತಿ ಗಣತಿಯನ್ನು ಸ್ವಾರ್ಥ ಲಾಭಕ್ಕಾಗಿ ಬಳಸಿಕೊಳ್ಳಲಾಗಿದೆ. ಹಿಂದುಳಿದ ವರ್ಗದ ಆಯೋಗವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಬಹುಸಂಖ್ಯಾತರನ್ನು ಅಲ್ಪಸಂಖ್ಯಾತರೆಂದು ಬಿಂಬಿಸುವ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.