
ಬೆಂಗಳೂರು: ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಮೈಸೂರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ ಮಾಡಲಾಗುವುದು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಆಗುವ ರೀತಿ ಪ್ರಕರಣ ದಾಖಲಿಸಿ, ಸಂತ್ರಸ್ತರಿಗೆ ನ್ಯಾಯ ಕೊಡಿಸಲಾಗುವುದು. ಪ್ರಕರಣ ಶೀಘ್ರ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.