
ಬೆಂಗಳೂರು: ದಿ. ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆ ಹಿಂತಿರುಗಿಸಲು ಕೋರ್ಟ್ ದಿನಾಂಕ ನಿಗದಿಪಡಿಸಿದೆ.
ಮಾ. 6ರು ಮತ್ತು 7ರಂದು ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಲಾಗುವುದು. ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕ ಮಾಡಲಾಗಿದೆ. ತಮಿಳುನಾಡು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ. ಐಜಿಪಿ ವಿಜಲೆನ್ಸ್ ಹಾಜರಿರಬೇಕು ಎಂದು ಸೂಚನೆ ನೀಡಿದೆ.
ಒಡವೆ ತೆಗೆದುಕೊಂಡು ಹೋಗಲು ಆರು ಟ್ರಂಕ್ ಗಳನ್ನು ತರುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಜೊತೆಗೆ ವಿಡಿಯೋಗ್ರಾಫರ್, ಫೋಟೋಗ್ರಾಫರ್ ಕರೆತರಲು ತಿಳಿಸಲಾಗಿದೆ. ಎರಡು ದಿನಗಳು ಸಿಟಿ ಸಿವಿಲ್ ಕೋರ್ಟ್ ನಲ್ಲಿ ಭದ್ರತೆ ಒದಗಿಸಲು ತಿಳಿಸಲಾಗಿದೆ. ವಿಶೇಷ ನ್ಯಾಯಾಧೀಶ ಮೋಹನ್ ಅವರು ಈ ಬಗ್ಗೆ ಸೂಚನೆ ನೀಡಿದ್ದಾರೆ. ಕರ್ನಾಟಕಕ್ಕೆ ಕೊಡಬೇಕಾದ 5 ಕೋಟಿ ರೂಪಾಯಿ ವ್ಯಾಜ್ಯ ಶುಲ್ಕವನ್ನು ಇನ್ನು ಪಾವತಿಸಿಲ್ಲ ಎಂದು ನ್ಯಾಯಾಲಯಕ್ಕೆ ಎಸ್ಪಿಪಿ ಕಿರಣ್ ಜವಳಿ ಮಾಹಿತಿ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 6ಕ್ಕೆ ನಿಗದಿಪಡಿಸಿದೆ.