
ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 7 ಆರೋಪಿಗಳನ್ನು 11 ದಿನ ಸಿಐಡಿ ಕಸ್ಟಡಿಗೆ ವಹಿಸಲಾಗಿದೆ.
ಕಲಬುರ್ಗಿ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ, ಅರ್ಚನಾ, ಸುನಿತಾ, ಸುರೇಶ್ ಕಾಟೆಗಾಂವ್, ಕಾಳಿದಾಸ, ಸದ್ದಾಮ್, ಜ್ಯೋತಿ ಪಾಟೀಲ್ ಅವರಿಗೆ 11 ದಿನ ಸಿಐಡಿ ಕಸ್ಟಡಿಗೆ ವಹಿಸಲಾಗಿದೆ.