ಬೆಂಗಳೂರು: ಪತ್ನಿ ವಿದ್ಯಾವಂತಳಾಗಿದ್ದಾಳೆ ಎನ್ನುವ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲ. ಹಾಗಾಗಿ ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹರಾಗಿರುತ್ತಾರೆ. ಅವರು ವಿದ್ಯಾರ್ಹತೆ ಹೊಂದಿದ ಮಾತ್ರಕ್ಕೆ ಜೀವನ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಕೌಟುಂಬಿಕ ಪ್ರಕರಣವೊಂದರಲ್ಲಿ ಮೈಸೂರು ಕೌಟುಂಬಿಕ ನ್ಯಾಯಾಲಯ, ಪತಿ-ಪತ್ನಿಯ ವಿವಾಹವನ್ನು ಅನೂರ್ಜಿತಗೊಳಿಸಿದ್ದು, ಪತ್ನಿಗೆ ಪ್ರತಿ ತಿಂಗಳು ಮೂರು ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಸೂಚಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿ ಹೈಕೋರ್ಟ್ ನಲ್ಲಿ ಮರುಪರಿಶೀಲನೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಹೆಚ್. ಪ್ರಭಾಕರ ಶಾಸ್ತ್ರಿ ಅವರ ಪೀಠದಲ್ಲಿ ವಿಚಾರಣೆ ನಡೆದು, ಪತ್ನಿ ವಿದ್ಯಾವಂತಳು ಎನ್ನುವ ಕಾರಣಕ್ಕೆ ಆಕೆಗೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹರು ಎಂದು ತಿಳಿಸಿದ್ದಾರೆ.