![](https://kannadadunia.com/wp-content/uploads/2024/09/snehamai-krishna.jpg)
ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಮಂಗಳವಾರ 3ನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ, ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೆ ಆದೇಶಿಸಿದೆ ಎನ್. ಕುಮಾರ್ ಎಂಬುವರು 2015ರ ಜೂನ್ 30ರಂದು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಇದು ಸಾಕ್ಷ್ಯ ಹಂತದಲ್ಲಿದೆ.
ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಆದರೆ ಸ್ನೇಹಮಯಿ ಕೃಷ್ಣ ಗೈರು ಹಾಜರಾಗಿದ್ದರು. ಅವರು, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ನೋಟಿಸ್ ಹಿನ್ನಲೆ ವಿಚಾರಣೆಗೆ ಹಾಜರಾಗಿದ್ದರು. ಈ ಕಾರಣದಿಂದ ಕೋರ್ಟ್ ಗೆ ಹಾಜರಾಗಿರಲಿಲ್ಲ. ವಾರೆಂಟ್ ಜಾರಿ ಮಾಡಿದ ಕೋರ್ಟ್ ವಿಚಾರಣೆಯನ್ನು ನ. 6ಕ್ಕೆ ಮುಂದೂಡಿದೆ.