
ಮೈಸೂರು: ಚೆಕ್ ಬೌನ್ಸ್ ಪ್ರಕರಣ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಗುರುವಾರ ಆದೇಶಿಸಿದೆ.
2018ರಲ್ಲಿ ಸ್ನೇಹಮಯಿ ಕೃಷ್ಣ ಅವರು ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸಾಲ ಪಡೆದಿದ್ದು, ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕಿನ ಚೆಕ್ ನೀಡಿದ್ದರು. ಕುಮಾರ್ ಚೆಕ್ ಅನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ. ಆದರೆ, ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ನೇಹಮಯಿ ಕೃಷ್ಣ, ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.